ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್ಸಿಬಿ, ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಭೀತುಪಡಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ಗೇರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಾಯಕ ರಜತ್ ಪಾಟಿದರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ನಿಂದಾಗಿ ದಾಖಲೆಯ 255 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್, ಆರ್ಸಿಬಿ ಬೌಲರ್ಗಳಿಗೆ ದಾಳಿಗೆ ನಲುಗಿ ಅಲ್ಪ ಮೊತ್ತಕ್ಕೆ ಮಂಡಿಯೂರಿತು. ಆದಾಗ್ಯೂ ಗುಜರಾತ್ಗೆ ಫೈನಲ್ಗೇರಲು ಇನ್ನೊಂದು ಅವಕಾಶವಿದ್ದು, ಕ್ವಾಲಿಫೈಯರ್ 2 ಅನ್ನು ಆಡಲಿದೆ. ಆ ಪಂದ್ಯದಲ್ಲಿ ಗೆದ್ದರೆ ಮತ್ತೆ ಫೈನಲ್ನಲ್ಲಿ ಆರ್ಸಿಬಿಯನ್ನು ಎದುರಿಸಲಿದೆ.
Published On – 11:43 pm, Tue, 26 May 26
