ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿದ ಆರ್ಸಿಬಿ, ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಕಳೆದ ಪಂದ್ಯದಲ್ಲಿ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಆರ್ಸಿಬಿ, ಇದೀಗ ಗುಜರಾತ್ ವಿರುದ್ಧ 5 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಎರಡನೇ ಸ್ಥಾನವನ್ನು ಅಲಂಕರಿಸಿತು. ಇನ್ನು ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿಗೆ ಇದು 50ನೇ ಗೆಲುವಾಗಿದ್ದು, ಮತ್ತಷ್ಟು ವಿಶೇಷವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ 19ನೇ ಓವರ್ನಲ್ಲಿ ಗೆಲುವಿನ ದಡ ಮುಟ್ಟಿತು.
