IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ರಾಯ್ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ… (PC: IPL)
ಹರ್ಷಿತ್ ರಾಣಾ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ವೇಗಿ ಹರ್ಷಿತ್ ರಾಣಾ ಮೊಣಕಾಲು ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಕಾಣಿಸಿಕೊಳ್ಳುವುದಿಲ್ಲ. (PC: IPL)
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ. (PC: IPL)
ಆಕಾಶ್ ದೀಪ್: ಬೆನ್ನು ನೋವಿನ ಕಾರಣ ವೇಗದ ಬೌಲರ್ ಆಕಾಶ್ ದೀಪ್ ಕೂಡ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಸೌರಭ್ ದುಬೆ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್ಸಿಬಿ ವಿರುದ್ಧದ ಮ್ಯಾಚ್ನಲ್ಲಿ ಆಕಾಶ್ ದೀಪ್ ಕಣಕ್ಕಿಳಿಯುವುದಿಲ್ಲ. (PC: IPL)
ನುವಾನ್ ತುಷಾರ: ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಇನ್ನೂ ಸಹ ಎನ್ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ. (PC: IPL)
ಮತೀಶ ಪತಿರಾಣ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಶ್ರೀಲಂಕಾ ವೇಗಿ ಮತೀಶ ಪತಿರಾಣ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (PC: IPL)
