IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಏಪ್ರಿಲ್ 15 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ಇದಕ್ಕೆ ಮುಖ್ಯ ಕಾರಣ ಕೊಹ್ಲಿ ತಂಡದಿಂದ ಹೊರಗುಳಿದಿರುವುದು.
ಏಪ್ರಿಲ್ 12 ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದರು. ಹೀಗಾಗಿ ಅವರು ಫೀಲ್ಡಿಂಗ್ಗೆ ಆಗಮಿಸಿರಲಿಲ್ಲ. ಇದಾಗ್ಯೂ ಕೊಹ್ಲಿ ಎಲ್ಎಸ್ಜಿ ವಿರುದ್ಧದ ಪಂದ್ಯದ ವೇಳೆ ಸಂಪೂರ್ಣ ಫಿಟ್ ಆಗಲಿದ್ದಾರೆ ಎನ್ನಲಾಗಿತ್ತು.
ಆದರೆ ಇತ್ತೀಚಿನ ಅಪ್ಡೇಟ್ಗಳ ಪ್ರಕಾರ, ವಿರಾಟ್ ಕೊಹ್ಲಿ ಅವರು ತಂಡದ ಸದಸ್ಯರೊಂದಿಗೆ ಪಂದ್ಯದ ಸ್ಥಳಕ್ಕೆ ಪ್ರಯಾಣಿಸಿಲ್ಲ. ಅಂದರೆ ಬೆಂಗಳೂರಿಗೆ ಆಗಮಿಸಿಲ್ಲ. ಬದಲಾಗಿ ಮುಂಬೈನಲ್ಲೇ ಉಳಿದುಕೊಂಡಿದ್ದು, ತಂಡದ ಫಿಸಿಯೋಗಳ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ನಾಳೆ (ಏ.15) ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಇತ್ತ ಕಿಂಗ್ ಕೊಹ್ಲಿ ಕಣಕ್ಕಿಳಿಯದಿದ್ದರೆ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತ ಎಂದೇ ಹೇಳಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).
