Headlines

RCB vs MI: ಆರ್​​ಸಿಬಿ- ಮುಂಬೈ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? ಪಿಚ್ ಯಾರಿಗೆ ಸಹಕಾರಿ – Kannada News | IPL 2026: RCB vs MI 54th Match head to head, pitch and weather report

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ.

ಒಂದೆಡೆ ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ತಂಡವು ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದಿದ್ದು, ನಾಲ್ಕರಲ್ಲಿ ಸೋತಿದೆ. ಈ ಮೂಲಕ 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ಅಷ್ಟು ಉತ್ತಮವಾಗಿಲ್ಲ. ಆಡಿರುವ 10 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆದ್ದಿದ್ದರೆ, ಏಳು ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು, ಮುಂಬೈ ಇಂಡಿಯನ್ಸ್ ಯಾವುದೇ ಬೆಲೆ ತೆತ್ತಾದರೂ ಆರ್‌ಸಿಬಿ ವಿರುದ್ಧ ಗೆಲ್ಲಲೇಬೇಕು.

ಮುಖಾಮುಖಿ ದಾಖಲೆ

ಆರ್‌ಸಿಬಿ ಮತ್ತು ಮುಂಬೈ ತಂಡಗಳು ಇಲ್ಲಿಯವರೆಗೆ ಒಟ್ಟು 35 ಪಂದ್ಯಗಳನ್ನು ಆಡಿದ್ದು, ಮುಂಬೈ ತಂಡ 19 ಪಂದ್ಯಗಳಲ್ಲಿ ಗೆದ್ದಿದ್ದರೆ, ಆರ್‌ಸಿಬಿ 16 ಪಂದ್ಯಗಳಲ್ಲಿ ಗೆದ್ದಿದೆ. ಐಪಿಎಲ್ 2026 ರ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಮುಂಬೈ ತಂಡವನ್ನು 18 ರನ್‌ಗಳಿಂದ ಸೋಲಿಸಿತ್ತು.

ಪಿಚ್ ಹಾಗೂ ಹವಾಮಾನ ವರದಿ

ಇನ್ನು ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣವು ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡಕ್ಕೂ ಸಮನಾಗಿ ನೆರವಾಗಲಿದೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 191 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 181 ಆಗಿದೆ. ಅಕ್ಯೂವೆದರ್ ಪ್ರಕಾರ, ಭಾನುವಾರ ರಾಯ್‌ಪುರದಲ್ಲಿ ಹವಾಮಾನವು ಸ್ಪಷ್ಟ ಮತ್ತು ಬಿಸಿಲಿನಿಂದ ಕೂಡಿರುತ್ತದೆ. ಮಳೆ ಬರುವ ಸಾಧ್ಯತೆ ಕಡಿಮೆ. ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

IPL 2026: ತನ್ನ 2ನೇ ತವರು ಮೈದಾನದಲ್ಲಿ ಚೊಚ್ಚಲ ಪಂದ್ಯವನ್ನಾಡಲಿದೆ ಆರ್​ಸಿಬಿ; ಎದುರಾಳಿ ಯಾರು?

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ. ಇಂಪ್ಯಾಕ್ಟ್ ಪ್ಲೇಯರ್: ರಾಸಿಖ್ ಸಲಾಂ.

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ನಮನ್ ಧೀರ್, ಹಾರ್ದಿಕ್ ಪಾಂಡ್ಯ/ ಸೂರ್ಯಕುಮಾರ್ ಯಾದವ್ (ನಾಯಕ), ವಿಲ್ ಜಾಕ್ಸ್, ತಿಲಕ್ ವರ್ಮಾ, ಕಾರ್ಬಿನ್ ಬಾಷ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಅಲ್ಲಾ ಘಜನ್ಫರ್, ರಘು ಶರ್ಮಾ. ಇಂಪ್ಯಾಕ್ಟ್ ಪ್ಲೇಯರ್: ರಾಜ್ ಬಾವಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *