ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ.
