
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್ ಆರ್ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದ್ದ ಎಸ್ಆರ್ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್ಸಿಬಿ ಕೇವಲ 15.4 ಓವರ್ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ, ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಸುಲಭ ಜಯ ದಾಖಲಿಸಿತು.