ನವದೆಹಲಿ, ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ಜರಗುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್ ಸಿಂಧೂರ್ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಅತಿಥಿಗಳಾಗಿ ಈ ಎಲ್ಲ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
