SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು? – Kannada News | SA vs NZ T20 World Cup Semifinal: Eden Gardens Weather, Pitch & Reserve Day Explained

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ. ಈಗ ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಕೋಲ್ಕತ್ತಾದ ಹವಾಮಾನ ಹೇಗಿರಲಿದೆ? ಈ ಪಂದ್ಯಕ್ಕೆ ಮೀಸಲು ದಿನವಿದೆಯಾ?. ಮೀಸಲು ದಿನದ ನಿಯಮಗಳೇನು? ಹಾಗೆಯೇ ಈಡನ್ ಗಾರ್ಡನ್ಸ್‌ ಪಿಚ್ ಯಾರಿಗೆ ಸಹಕಾರಿಯಾಗಲಿದೆ ಎಂಬ ವರದಿ ಇಲ್ಲಿದೆ.

ಹವಾಮಾನ ಹೇಗಿರುತ್ತದೆ?

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ಆಕಾಶವು ಸ್ಪಷ್ಟವಾಗಿರಲಿದೆ. ಅಂದರೆ ಮಳೆ ಬರುವ ಸಾಧ್ಯತೆ ಇಲ್ಲ. ಆದ್ದರಿಂದ, ಈ ಪಂದ್ಯವನ್ನು ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ವೀಕ್ಷಿಸಬಹುದು. ಕನಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಆದ್ದರಿಂದ, ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಇರಲಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವುದು ಕಷ್ಟಕರವಾಗುತ್ತದೆ. ಆದ್ದರಿಂದ, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.

ಮೀಸಲು ದಿನ ನಿಗದಿ

ನಿಗದಿಪಡಿಸಿದ ದಿನದಂದು ಮಳೆ ಅಥವಾ ಇತರೆ ಕಾರಣದಿಂದಾಗಿ ಪಂದ್ಯ ನಡೆಯದಿದ್ದರೆ, ಮೀಸಲು ದಿನದಂದು ಪಂದ್ಯವನ್ನು ನಡೆಸಲಾಗುತ್ತದೆ. ಇದರರ್ಥ ಐಸಿಸಿ ಈ ಎರಡು ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದೆ. ಅಂದರೆ ಮಾರ್ಚ್​ 4 ರಂದು ನಡೆಯಬೇಕಿರುವ ಮೊದಲ ಸೆಮಿಫೈನಲ್‌ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ, ಈ ಪಂದ್ಯವನ್ನು ಮಾರ್ಚ್​ 5 ರಂದು ನಡೆಸಲಾಗುತ್ತದೆ. ಆ ದಿನದಂದು ಕೂಡ ಪಂದ್ಯ ನಡೆಯದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್​ಗೇರಲಿದೆ. ಅಂದರೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಫೈನಲ್​ಗೆ ಟಿಕೆಟ್ ಪಡೆಯಲಿದೆ.

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

ಈಡನ್ ಗಾರ್ಡನ್ಸ್ ಪಿಚ್ ಯಾರಿಗೆ ಸಹಕಾರಿ?

ಈಡನ್ ಗಾರ್ಡನ್ಸ್‌ನ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಹೀಗಾಗಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯಾಗುವುದರಲ್ಲಿ ಸಂದೇಹವಿಲ್ಲ. ಚೆಂಡು ವಿಕೆಟ್ ಮೇಲೆ ಉತ್ತಮ ಬೌನ್ಸ್ ಪಡೆಯುತ್ತದೆ ಮತ್ತು ಚೆಂಡು ಬ್ಯಾಟ್‌ಗೆ ಬರುತ್ತದೆ. ಅಲ್ಲದೆ ಇಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವುದರಿಂದ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವುದು ಉತ್ತಮ ಆಯ್ಕೆ. ಏಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟುವುದು ಸುಲಭವಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *