ಕೊಡಗು, ಫೆಬ್ರುವರಿ 08: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ (Car Catches Fire) ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ ಧೂಮ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.