ಶಿವಮೊಗ್ಗ, ಡಿಸೆಂಬರ್ 18: ಕರ್ತವ್ಯ ನಿರತ ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್ಗೆಂದು ASI ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
