Somnath Swabhiman Parv: ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi receives a rousing welcome after he arrives at Somnath Temple

ಸೋಮನಾಥ, ಜನವರಿ 10: ಗುಜರಾತಿನ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ (Somnath Temple) ನಡೆಯುತ್ತಿರುವ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಸೋಮನಾಥ ಸ್ವಾಭಿಮಾನ್ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೋಮನಾಥಕ್ಕೆ ಆಗಮಿಸಿದರು. ಈ ವೇಳೆ ದಾರಿಯುದ್ದಕ್ಕೂ ಸಾರ್ವಜನಿಕರು ಕೇಸರಿ ಬಾವುಟಗಳನ್ನು ಹಿಡಿದು, “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಸ್ವಾಗತ ಕೋರಿದರು. ಜನವರಿ 8ರಿಂದ 11ರವರೆಗೆ ಆಯೋಜಿಸಲಾಗುತ್ತಿರುವ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮನಾಥ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *