
ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಮಣಿಸಿದ ಸನ್‌ರೈಸರ್ಸ್ ಲೀಗ್ನಲ್ಲಿ ಮೂರನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇತ್ತ ಕಳೆದೆರಡು ಪಂದ್ಯಗಳಲ್ಲಿ ಗೆದ್ದು ಗೆಲುವಿನ ಹಾದಿಗೆ ಮರಳಿದ್ದ ಸಿಎಸ್ಕೆ ಮತ್ತೆ ಸೋಲಿನ ಸುಳಿಗೆ ಸಿಲುಕಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ತಂಡ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್ಕೆ 184 ರನ್ ಕಲೆಹಾಕಲಷ್ಟೇ ಶಕ್ತವಾಗಿ 10 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ಸಿಎಸ್ಕೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲೇ ಉಳಿದಿದೆ.