ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆರಂಭಿಕ ಅಭಿಷೇಕ್ ಶರ್ಮಾ ಮತ್ತೆ ನೆರವಾಗಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಈ ಪಂದ್ಯದಲ್ಲಿ ಸನ್ರೈಸರ್ಸ್ಗೆ ಸ್ಫೋಟಕ ಆರಂಭ ಸಿಗಲಿಲ್ಲ. ಮೊದಲ 6 ಓವರ್ಗಳಲ್ಲಿ ಸನ್‌ರೈಸರ್ಸ್ ತಂಡ 67 ರನ್ ಮಾತ್ರ ಕಲೆಹಾಕಿತು. ಆದರೆ ತಂಡ ಒಂದೇ ಒಂದು ವಿಕೆಟ್ ಕಳೆದುಕೊಂಡಿರಲಿಲ್ಲ. ಆದಾಗ್ಯೂ ಇಲ್ಲಿಂದ ಗೇರ್ ಬದಲಿಸಿದ ಅಭಿಷೇಕ್ 25 ಎಸೆತಗಳಲ್ಲಿ ಈ ಆವೃತ್ತಿಯ ಮೂರನೇ ಅರ್ಧಶತಕವನ್ನು ಪೂರೈಸಿದರು. ಇದರ ಜೊತೆಗೆ ಹೆಡ್ ಅವರೊಂದಿಗೆ ಮೊದಲ ವಿಕೆಟ್ಗೆ 97 ರನ್ಗಳ ಜೊತೆಯಾಟವನ್ನು ರಚಿಸಿದರು.
