ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಈ ಆವೃತ್ತಿಯಲ್ಲಿ ತಮ್ಮ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದಾದ ಬಳಿಕ ತಮ್ಮ ಬ್ಯಾಟಿಂಗ್ ಗೇರ್ ಬದಲಿಸಿದ ಅಭಿಷೇಕ್ ಡೆಲ್ಲಿ ಬೌಲರ್ಗಳ ವಿರುದ್ಧ ಬೌಂಡರಿಗಳ ಮಳೆಗರೆದು ಕೇವಲ 47 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಇದು ಟಿ20 ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ ಅವರ 9ನೇ ಶತಕವಾಗಿದೆ.
