ಐಪಿಎಲ್ 2026 ರ 31 ನೇ ಪಂದ್ಯದು ಸನ್ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸನ್ರೈಸರ್ಸ್ ಹೈದರಾಬಾದ್ ತನ್ನ ತವರಿನ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸಲಿದೆ. ಎರಡೂ ತಂಡಗಳು ಪ್ರಸ್ತುತ ತಲಾ ಆರು ಅಂಕಗಳನ್ನು ಹೊಂದಿವೆ, ಆದರೆ ಸನ್ರೈಸರ್ಸ್ ಹೈದರಾಬಾದ್ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಡೆಲ್ಲಿ ತಂಡ ಕಳೆದ ಪಂದ್ಯದಲ್ಲಿ ಬಲಿಷ್ಠ ಆರ್ಸಿಬಿಯನ್ನು ಸೋಲಿಸಿದ ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಟಾಸ್ ಗೆದ್ದ ಡೆಲ್ಲಿ
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಪ್ಲೇಯಿಂಗ್ 11ನಲ್ಲಿ ಒಂದು ಬದಲಾವಣೆ ಮಾಡಿದೆ. ಅಕಿಬ್ ನಬಿ ಬದಲಿಗೆ ನಿತೀಶ್ ರಾಣಾ ಆಡಲಿದ್ದಾರೆ. ಹಾಗೆಯೇ ಸನ್ರೈಸರ್ಸ್ ಹೈದರಾಬಾದ್ ಕೂಡ ತಮ್ಮ ಆಡುವ XI ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ.
ಮುಖಾಮುಖಿ ದಾಖಲೆ
ಇಲ್ಲಿಯವರೆಗೆ, ಈ ಎರಡೂ ತಂಡಗಳ ನಡುವೆ 26 ಪಂದ್ಯಗಳು ನಡೆದಿವೆ. ಅವುಗಳಲ್ಲಿ ಸನ್ರೈಸರ್ಸ್ ಹೈದರಾಬಾದ್ 13 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಟೈ ಆಗಿದ್ದರೆ, ಇನ್ನೊಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ ಮುಖಾಮುಖಿಯಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನೀಡಿವೆ ಎನ್ನಬಹುದು.
ಉಭಯ ತಂಡಗಳ ಪ್ಲೇಯಿಂಗ್ 11
ಡೆಲ್ಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸಮೀರ್ ರಿಜ್ವಿ, ನಿತೀಶ್ ರಾಣಾ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಟಿ.ನಟರಾಜನ್, ಲುಂಗಿ ಎನ್ಗಿಡಿ.
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂಗ್ ಕುಮಾರ್, ಹರ್ಷ್ ದುಬೆ, ಸಾಕಿಬ್ ಹುಸೇನ್, ಇಶಾನ್ ಮಾಲಿಂಗ.