ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯಲು ಆರ್‌ಸಿಬಿ ವಿರುದ್ಧ ಗೆಲ್ಲಲೇಬೇಕಾಗಿದೆ.
