ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ಪರ ಆರಂಭಿಕ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವೈಭವ್ ತಮ್ಮ ಅರ್ಧಶತಕದ ಇನ್ನಿಂಗ್ಸ್ನಲ್ಲಿ 8 ಸಿಕ್ಸರ್ಗಳು ಹಾಗೂ 1 ಬೌಂಡರಿ ಬಾರಿಸಿದರು. ಅಂದರೆ ವೈಭವ್ ಕೇವಲ ಬೌಂಡರಿ ಹಾಗೂ ಸಿಕ್ಸರ್ಗಳಿಂದಲೇ ತಮ್ಮ ಅರ್ಧಶತಕ ಪೂರೈಸಿದರು. ವೈಭವ್ ಅವರ ಈ ಆರ್ಭಟದಿಂದಾಗಿ ರಾಜಸ್ಥಾನ್ 3.2 ಓವರ್ಗಳಲ್ಲಿಯೇ 50 ರನ್ಗಳ ಗಡಿ ದಾಟಿತು.
