SSB ಕಾನ್ಸ್‌ಟೇಬಲ್ ನೇಮಕಾತಿImage Credit source: Ai generated
ಭಾರತ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ್ (SSB), 2026ನೇ ಸಾಲಿನ ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಒಟ್ಟು 404 ಹುದ್ದೆಗಳು ಲಭ್ಯವಿವೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದಾದ್ಯಂತ ಅಥವಾ ವಿದೇಶಗಳಲ್ಲಿ ಸೇವೆಯನ್ನು ಸಲ್ಲಿಸಲು ಸಿದ್ಧರಿರಬೇಕು.
ಶೈಕ್ಷಣಿಕ ಮತ್ತು ಕ್ರೀಡಾ ಅರ್ಹತೆಗಳು:
ಕನಿಷ್ಠ 10ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ ಉತ್ತೀರ್ಣರಾಗಿರಬೇಕು. ಅಥ್ಲೆಟಿಕ್ಸ್, ಈಜು, ಬಾಕ್ಸಿಂಗ್, ಫುಟ್‌ಬಾಲ್, ಹಾಕಿ, ಕಬಡ್ಡಿ, ವಾಲಿಬಾಲ್, ಕುಸ್ತಿ, ಯೋಗಾಸನ ಸೇರಿದಂತೆ ವಿವಿಧ ಕ್ರೀಡಾ ವಿಭಾಗಗಳಲ್ಲಿ ಅಂತರರಾಷ್ಟ್ರೀಯ ಅಥವಾ ರಾಷ್ಟ್ರೀಯ ಮಟ್ಟದಲ್ಲಿ ದೇಶ ಅಥವಾ ರಾಜ್ಯವನ್ನು ಪ್ರತಿನಿಧಿಸಿರಬೇಕು. ಇದಲ್ಲದೇ ಸೀನಿಯರ್ ಅಥವಾ ಜೂನಿಯರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಪದಕ ಗೆದ್ದವರು ಮತ್ತು ಖೇಲೋ ಇಂಡಿಯಾ ಗೇಮ್ಸ್ ಪದಕ ವಿಜೇತರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ವಯೋಮಿತಿ ಮತ್ತು ಸಡಿಲಿಕೆ:
ಅಭ್ಯರ್ಥಿಗಳ ವಯಸ್ಸು 18 ರಿಂದ 23 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ (SC/ST/OBC) ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್ ನೇಮಕಾತಿ ಘೋಷಣೆ
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಪ್ಯಾಕೇಜ್ ದೊರೆಯಲಿದೆ. ಮಾಸಿಕ ರೂ. 21,700 ರಿಂದ ರೂ. 69,100 ರವರೆಗೆ ವೇತನದ ಜೊತೆಗೆ ಸರ್ಕಾರದ ಇತರ ಸೌಲಭ್ಯಗಳು ಮತ್ತು ಭತ್ಯೆಗಳು ಲಭ್ಯವಿರುತ್ತವೆ.
ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಜೂನ್ 7. ಸಾಮಾನ್ಯ (General), EWS ಮತ್ತು OBC ಅಭ್ಯರ್ಥಿಗಳಿಗೆ 100ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ (SC), ಎಸ್‌ಟಿ (ST) ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಕ್ರೀಡಾ ಕ್ಷೇತ್ರದಲ್ಲಿನ ಅವರ ಸಾಧನೆ, ಅರ್ಹತೆ ಮತ್ತು ದಾಖಲೆಗಳ ಆಧಾರದ ಮೇಲೆ ನೇರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
