SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

ಬೆಂಗಳೂರು, ಏಪ್ರಿಲ್​​ 10: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ.

ಅರ್ಜಿದಾರರಿಗೆ 1 ಲಕ್ಷ ದಂಡ!

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಆ ಮೂಲಕ ಅರ್ಜಿದಾರರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ; ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ

SSLC ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದವಾದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲನೀಶ್​​ಗೆ ಪತ್ರ ಕೂಡ ಬರೆದಿದ್ದರು. ಗವರ್ನರ್​​ ಈ ನಡೆ ವಿರುದ್ಧ ಸಿಡಿದೆದ್ದಿದ್ದ ಕರವೇ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಈ ರೀತಿ ಮಾಡೋದು ತಪ್ಪು. ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *