
ಬೆಂಗಳೂರು, (ಮಾರ್ಚ್ 17): 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್ಆರ್ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದು. ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಕಂಡಕ್ಟರ್ ಮನ ಮಿಡಿದಿದ್ದು, ಡ್ರೈವರ್ ಸಾಹೇಬ್ರೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ ಕೈ ಮಾಡಿದರೂ ಬಸ್ ನಿಲ್ಲಿಸಿ ಎಂದು ಕಂಡಕ್ಟರ್ ಹೇಳಿದ್ದಾರೆ, ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ. ಇನ್ನು 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ನಿರ್ವಾಹಕರೊಬ್ಬರು ಆಡಿದ ಮಾತು ಹೇಗಿದೆ ಕೇಳಿ.