ಕಾರವಾರ, ಏಪ್ರಿಲ್ 23: ಇತ್ತೀಚೆಗೆ ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್ನ ಎಡವಟ್ಟು ಬೆಳಕಿಗೆ ಬಂದಿತ್ತು. ಇದೀಗ ಇಂತಹದೊಂದು ಎಡವಟ್ಟು ಇದೀಗ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲೂ ನಡೆದಿದ್ದು, ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯನ್ನ ಫೇಲ್ ಮಾಡಲಾಗಿದೆ. ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗೆ ಹಾಜರಾಗಿದ್ದರು ಸಮಾಜ-ವಿಜ್ಞಾನ ವಿಷಯದ ಪರೀಕ್ಷೆಗೆ ಗೈರು ಎಂದು ನಮೋದಿಸಲಾಗಿದೆ. ಕನ್ನಡ -100, ಇಂಗ್ಲಿಷ್ -92, ಅರ್ಥಶಾಸ್ತ್ರ-98 , ಪೊಲಿಟಿಕಲ್ ಸೈನ್ಸ್ -92, ಒಟ್ಟು-526 ಅಂಕ ಗಳಿಸುವ ಮೂಲಕ 84.16 % ಫಲಿತಾಂಶ ಪಡೆದಿದ್ದಾರೆ. ಆದರೆ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಫೇಲ್ ಎಂದು ರಿಸಲ್ಟ್ ಬಂದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.