ಬೆಂಗಳೂರು, ಏಪ್ರಿಲ್ 22: ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ನು ತೃತೀಯ ಭಾಷೆಯ ವಿಷಯಕ್ಕೆ ಅಂಕನೋ ಇಲ್ಲಾ ಗ್ರೇಡೋ ಎಂಬ ಗೊಂದಲ ಉಂಟಾಗಿತ್ತು. ಸದ್ಯ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಗ್ರೇಡ್ ಬದಲು ಅಂಕ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನ ನೀಡಿ ಮೌಲ್ಯಮಾಪನ ಮಾಡಲಾಗಿದೆ. ಹೀಗಾಗಿ ನಾಳೆ ಅಂಕಗಳನ್ನೇ ನೀಡಲು ಇಲಾಖೆ ಮುಂದಾಗಿದೆ ಎಂದು ಅವರು ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
