T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ – Kannada News | T20 World Cup 2026: Pakistan Boycotts India Clash Over Political Tensions

2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನವೇ ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇಷ್ಟು ದಿನ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ವಿವಾದವನ್ನು ಬಗೆಹರಿಸಲು ಹರಸಾಹಸ ಪಟ್ಟಿದ್ದ ಐಸಿಸಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್​ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ. ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಆಡುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿದೆ. ಆದರೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಭಾರತದ ವಿರುದ್ಧ ಗುಂಪು ಹಂತದ ಪಂದ್ಯವನ್ನು ಆಡುವುದಿಲ್ಲ ಎಂದಿದೆ. ರಾಜಕೀಯ ಮತ್ತು ಇತ್ತೀಚಿನ ಬೆಳವಣಿಗೆಗಳ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಾಕ್ ಸರ್ಕಾರ ತಿಳಿಸಿದೆ.

Source link

Leave a Reply

Your email address will not be published. Required fields are marked *