Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್ ರಿವೀಲ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ – Kannada News | Toxic Second Single Out: Yash and Tara Sutaria’s Striking Chemistry Wins Hearts in Manamohaka

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ.

ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’

ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡು ಬೋಲ್ಡ್ ನೆಸ್ ಮೂಲಕ ಗಮನ ಸೆಳೆದಿದ್ದರು. ಇಂದು ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಮಧುರವಾದ ಪ್ರಣಯಗೀತೆ. ಈ ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಸ್ಕ್ರೀನ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಕೂಡ ಕಾಣಿಸಿಕೊಳ್ಳುತ್ತಾರೆ.

ಪ್ರಮೋದ್ ಮರವಂತೆ ಸಾಹಿತ್ಯ

‘ಟಾಕ್ಸಿಕ್’ ಚಿತ್ರದ ಮೊದಲ ಹಾಡಿಗೆ ಸ್ಯಾಂಡಲ್‌ವುಡ್‌ನ ಸ್ಟಾರ್ ಲಿರಿಸಿಸ್ಟ್ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದರು. ಈಗ ಮನಮೋಹಕ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸಿದ್ದಾರ್ಥ್ ಬಸರೂರ್ ಅವರು ಹಾಡಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ ರೊಮ್ಯಾನ್ಸ್ ಮಾಡುತ್ತಾರೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಇದ್ದ ಬೆನ್ನಲ್ಲೇ, ಈಗ ತಾರಾ ಸುತಾರಿಯಾ ಜೊತೆಗಿನ ಈ ಮಧುರ ಪ್ರಣಯಗೀತೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:44 am, Tue, 21 July 26

Source link

Leave a Reply

Your email address will not be published. Required fields are marked *