ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಪಿಎಂ ಜವಾಹರ್ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸುದೀರ್ಘ ಅವಧಿಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ದಾಖಲೆ ಇದೀಗ ಮೋದಿ ಅವರದ್ದಾಗಿದೆ. ಮತ್ತೊಂದೆಡೆ, ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದು ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಸಚಿವ ಸಂಪುಟದ ಖಾತೆ ಕ್ಯಾತೆ ಮುಂದುವರಿದಿರುವುದರ ಜತೆಗೆ, ಸಂಪುಟ ವಿಸ್ತರಣೆ ವೇಳೆ ಸಚಿವರಾಗಲು ಲಾಬಿ ಜೋರಾಗಿದೆ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಟ್ಟದಲ್ಲಿ, ಇರಾನ್ ಹಾಗೂ ಇಸ್ರೆಲ್ ಸಂಘರ್ಷ ಮತ್ತೆ ತೀವ್ರಗೊಳ್ಳುವ ಸುಳಿವು ದೊರೆತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.