ಬೆಂಗಳೂರು, ಮೇ 05: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್ಗೆ ಆತಂಕ ಮೂಡಿಸಿದೆ. ಎಲೆಕ್ಷನ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿರೋದು ಮುಸ್ಲಿಂ ಮತದಾರರು ಕಾಂಗ್ರೆಸ್ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಎಸ್ಡಿಪಿಐ ಅಭ್ಯರ್ಥಿ ಸೇರಿದಂತೆ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಸಮಉದಾಯಕ್ಕೆ ಸೇರಿರುವ ಕ್ಯಾಂಡಿಡೇಟ್ಗಳು 20 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ದೊಡ್ಡ ಮಟ್ಟದ ಹಾನಿಯನ್ನುಂಟು ಮಾಡಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ.
ವಿಜಯ್ ಮುಂದಿನ ನಡೆಯೇ ಕುತೂಹಲ
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ ಸರ್ಕಾರ ರಚನೆಗೆ ಅಗತ್ಯ ಬಹುತಗಳ ಕೊರತೆ ಇದೆ. ಟಿವಿಕೆ 108 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 118 ತಲುಪಲು ಇನ್ನೂ 10 ಸ್ಥಾನಗಳ ಕೊರತೆಯಿದೆ. ಹೀಗಾಗಿ ವಿಜಯ್ ಮುಂದಿನ ನಡೆ ಏನು ಎಂಬ ಪ್ರಶ್ನೆ ಉದ್ಭವಿಸಿದೆ. ಯಾರ ಜೊತೆಗೆ ಟಿವಿಕೆ ಮೈತ್ರಿ ಮಾಡಿಕೊಳ್ಳಬುದೆಂಬ ಕುತೂಹಲವೂ ಹೆಚ್ಚಿದೆ.
ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಈ ಹೊತ್ತಿನ ಪ್ರಮುಖ ಅಪ್ಡೇಟ್ಸ್
ಬಂಗಾಳ, ಅಸ್ಸಾಂನಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಇಳಿಕೆ
ಜಮ್ಮು ಮತ್ತು ಕಾಶ್ಮೀರದ ನಂತರ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಈ ಬಾರಿ ಶಾಸಕರ ಸಂಖ್ಯೆ 26ಕ್ಕೆ ಕುಸಿದಿದೆ. ಒಟ್ಟು 294 ಕ್ಷೇತ್ರಗಳಿರುವ ಇಲ್ಲಿ ಕಳೆದಬಾರಿ 42 ಮಂದಿ ಮುಸ್ಲಿಂ ಶಾಸಕರಿದ್ದರು. ಹಾಗೆಯೇ ಅಸ್ಸಾಂನ ಒಟ್ಟು 126 ಸ್ಥಾನಗಳ ಪೈಕಿ ಈ ಬಾರಿ 22 ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದರೆ ಕೇರಳದಲ್ಲಿ ಮುಸ್ಲಿಂ ಸಾಸಕರ ಸಂಖ್ಯೆ 32 ರಿಂದ 35ಕ್ಕೆ ಏರಿದ್ದರೆ, ತಮಿಳುನಾಡಿನಲ್ಲಿ ಈ ಬಾರಿ ಒಟ್ಟು 9 ಮುಸ್ಲಿಂ ಶಾಸಕರು ವಿಧಾನಸಭೆ ಪ್ರವೇಶಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಅಪಸ್ವರ
ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದೂ ಸೇರಿದಂತೆ ಚುನಾವಣಾ ಆಯೋಗದ ಹಲವು ಕ್ರಮಗಳೇ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದು ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಅವರದ್ದಲ್ಲ. ಬದಲಾಗಿ ಅದು ಚುನಾವಣಾ ಆಯೋಗದ ಜಯ. ಚುನಾವಣಾ ಆಯೋಗವನ್ನು ಜೇಬಿನಲ್ಲಿ ಇಟ್ಟುಕೊಂಡು ಬಿಜೆಪಿಗರು ಚುನಾವಣೆ ನಡೆಸಿದ್ದರು ಎಂದು ಖರ್ಗೆ ದೂರಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 2:55 pm, Tue, 5 May 26