Breaking News Today Live Updates in Kannada: ದೇಶ ಮತ್ತು ವಿದೇಶಗಳ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್ಗೆ ಸುಸ್ವಾಗತ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಹಾಗೂ ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ‘ಸುಗಮ ದರ್ಶನ’ ನೀತಿಯನ್ನು ಜಾರಿಗೆ ತರಲಾಗಿದೆ. ಇನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಯುದ್ಧ ಶೀಘ್ರ ಅಂತ್ಯಗೊಳ್ಳುವ ಸುಳಿವು ನೀಡಿದ್ದು, ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆ ವರದಿ ಮಾಡಿದ ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಕೆಂಡಾಮಂಡಲರಾಗಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.