ಬೆಂಗಳೂರು, ಮೇ.13: 2022ರಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಧರ್ಮದಂಗಲ್‌ಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ರಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳು ದಾಖಲೆಯ ಆದಾಯ ಗಳಿಸಿವೆ. ಕುಕ್ಕೆ ಸುಬ್ರಹ್ಮಣ್ಯ 167.89 ಕೋಟಿ ರೂ. ಗಳಿಸಿ ಸತತ 15ನೇ ವರ್ಷವೂ ರಾಜ್ಯದ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಕಲಬುರಗಿ ರೊಟ್ಟಿ ಈಗ ಜಾಗತಿಕ ಮಟ್ಟಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ಈ ವಿಶಿಷ್ಟ ಆಹಾರ ಅಮೆರಿಕ, ಕೆನಡಾ, ಆಸ್ಟ್ರೇಲಿಯಾದ ಕನ್ನಡಿಗರನ್ನು ತಲುಪಲಿದೆ. ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ.
ಕೇಸರಿ ಶಾಲ್‌ಗೆ ನೋ, ಹಿಜಾಬ್‌ಗೆ ಎಸ್ ಎಂದ ಸರ್ಕಾರ
2022ರಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಧರ್ಮದಂಗಲ್‌ಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. 2022ರಲ್ಲಿ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಇತರ ವಿದ್ಯಾರ್ಥಿಗಳು ಕೇಸರಿ ಶಾಲ್ ಧರಿಸಿ ಕಾಲೇಜಿಗೆ ಬಂದಿದ್ದರು. ಇದು ಇಡೀ ದೇಶಾದ್ಯಂತ ದೊಡ್ಡ ಸುದ್ದಿಯಾಗಿದ್ದಲ್ಲದೆ, ಕಾನೂನು ಸಮರಕ್ಕೂ ಕಾರಣವಾಗಿತ್ತು. ಅಂದು ಈ ವಿಚಾರವು ರಾಜ್ಯದಲ್ಲಿ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿತ್ತು. ದೀರ್ಘಕಾಲದ ವಿವಾದದ ಬಳಿಕ ಈಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಆದರೆ, ಇದೇ ವೇಳೆ ಕೇಸರಿ ಶಾಲ್ ಧರಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರದ ಈ ನಿರ್ಧಾರವು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಹೇಳಿದಂತೆ ಗುಡ್ನ್ಯೂಸ್ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್ಗೆ ಕಸಿವಿಸಿ; ಈ ಹೊತ್ತಿನ ಟಾಪ್ 5 ಸುದ್ದಿಗಳು ಇಲ್ಲಿವೆ
ಕರ್ನಾಟಕದ ದೇವಸ್ಥಾನಗಳ ಆದಾಯದಲ್ಲಿ ನವ ದಾಖಲೆ
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆದಾಯ ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸಿವೆ. ಭಕ್ತರ ಸಂಖ್ಯೆಯಲ್ಲಿನ ಗಣನೀಯ ಏರಿಕೆ ಮತ್ತು ಕಾಣಿಕೆಗಳ ಮಹಾಪೂರವೇ ಈ ಸಾಧನೆಕ್ಕೆ ಕಾರಣವಾಗಿದೆ.
ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು
ಜಿಲ್ಲೆಯ ಸಾಂಪ್ರದಾಯಿಕ ಆಹಾರ ಮತ್ತು ವಿಶಿಷ್ಟ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಜಾಗತಿಕ ಮಾರುಕಟ್ಟೆಗೆ ಭರ್ಜರಿಯಾಗಿ ಲಗ್ಗೆ ಇಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ರೊಟ್ಟಿಗಳ ಮೊದಲ ರಫ್ತು ಘಟಕಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರು ತಮ್ಮೂರಿನ ರೊಟ್ಟಿಯ ಸವಿಯನ್ನು ಸವಿಯಬಹುದಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
