ಜಾಗತಿಕ ತೈಲ ಬಿಕ್ಕಟ್ಟು ಹಾಗೂ ಪಶ್ಚಿಮ ಏಷ್ಯಾ ಸಂಘರ್ಷದ ಸವಾಲುಗಳ ನಡುವೆಯೂ ವಿಶ್ವದ ಪ್ರಮುಖ ಕಾರ್ಪೊರೇಟ್ ಕಂಪನಿಗಳು ಭಾರತದ ಬಲಿಷ್ಠ ಆರ್ಥಿಕತೆಯನ್ನು ನಂಬಿ ಬೃಹತ್ ಹೂಡಿಕೆ ಮಾಡಲು ಸಾಲುಗಟ್ಟಿ ನಿಂತಿರುವುದು ದೇಶಕ್ಕೆ ಅತ್ಯಂತ ಆಶಾದಾಯಕ ಸಂಗತಿಯಾಗಿದೆ. ಇತ್ತ ಸಿನಿರಂಗದಲ್ಲಿ ಭಾರಿ ಕುತೂಹಲ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ದಾಸ್ ನಿರ್ದೇಶನದ ಹೈ-ಬಜೆಟ್ ಆಕ್ಷನ್ ಸಿನಿಮಾ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ಜುಲೈ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದ್ದು, ಪ್ಯಾನ್-ಇಂಡಿಯಾ ಸಿನಿಮಾ ಆಗಸ್ಟ್ 26ರಂದು ತೆರೆಕಾಣಲು ಸಜ್ಜಾಗಿದೆ. ಆದರೆ, ಮತ್ತೊಂದೆಡೆ ಹವಾಮಾನ ವೈಪರೀತ್ಯ ಹಾಗೂ ಸೂಪರ್ ಎಲ್ ನಿನೋ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂಗಾರು ಆರಂಭದಲ್ಲೇ ಭಾರಿ ಹಿನ್ನಡೆ ಅನುಭವಿಸಿದ್ದು, ಜೂನ್ ತಿಂಗಳಿನಲ್ಲಿ ಬರೋಬ್ಬರಿ ಶೇ 41 ರಷ್ಟು ಮಳೆ ಕೊರತೆಯಾಗಿರುವುದು ರಾಜ್ಯದಲ್ಲಿ ತೀವ್ರ ಆತಂಕ ಮೂಡಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.