Breaking News Today Live Updates in Kannada: ಹನೂರು ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ನಾಯಕರ ಮಧ್ಯಪ್ರವೇಶಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. “ನಮ್ಮದು ಫೆಡರಲ್ ಒಕ್ಕೂಟ, ಬೇರೆ ರಾಜ್ಯಗಳು ನಮ್ಮ ಆಡಳಿತದಲ್ಲಿ ತಲೆಹಾಕಬಾರದು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಬೇಕೆಂದು ನಮಗೆ ಗೊತ್ತಿದೆ” ಎಂದು ಅವರು ಹೇಳಿದ್ದಾರೆ. ಮತ್ತೊಂದೆಡೆ, ಹನೂರು ಘಟನಾ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳ ಫೋಟೋದಲ್ಲಿ ಸ್ಟಿಕ್ಕರ್ ತೆಗೆಯದ ಹೊಸ ಚಪ್ಪಲಿ ಕಂಡುಬಂದಿದ್ದು, ನಕಲಿ ಸಾಕ್ಷಿ ಸೃಷ್ಟಿಯ ದೊಡ್ಡ ಅನುಮಾನ ಮೂಡಿಸಿದೆ. ಪ್ರಸ್ತುತ FSL ಮತ್ತು ಬ್ಯಾಲೆಸ್ಟಿಕ್ ತಜ್ಞರು ಘಟನಾ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.ಅತ್ತ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಲಂಚ ಹಾಗೂ ಅಕ್ರಮ ಆರೋಪದಡಿ, ಅಮಾನತುಗೊಂಡ ಸದಸ್ಯ ಶಿವಶಂಕರಪ್ಪ ಸಾಹುಕಾರ್ ಮನೆ, KPSC ಕಚೇರಿ ಸೇರಿದಂತೆ ರಾಜ್ಯದ 21 ಕಡೆಗಳಲ್ಲಿ ಇಡಿ (ED) ಮೆಗಾ ರೇಡ್ ನಡೆಸಿ ತನಿಖೆ ಚುರುಕುಗೊಳಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.