ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada
ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್ ವೇಳೆ ಅವರ ಹಿಂಭಾಗ ರನ್ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್ಗಳ ಎಡವಟ್ಟಾ ಎಂದು ತಿಳಿಯಲು ಡಿಜಿಸಿಎ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಲಾಗಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಮುಖ್ಯಾಂಶಗಳು
- ಲ್ಯಾಂಡಿಂಗ್ ವೇಳೆ ನೆಲಕ್ಕಪ್ಪಳಿಸಿದ ಏರ್ಇಂಡಿಯಾ ವಿಮಾನದ ಹಿಂಭಾಗ
- ರಾಜ್ಯದಲ್ಲಿ ಭಾರಿ ಮಳೆ ಎಂದ ಹವಾಮಾನ ಇಲಾಖೆ
- ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿದ ಪಾಪರಾಜಿಗಳು
- ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್ ಆರ್‌ಸಿಬಿಗೆ ಸೇರ್ಪಡೆ
ಕರ್ನಾಟಕದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಅಲರ್ಟ್!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮೇ 26ರ ವೇಳೆಗೆ ಕೇರಳ ಪ್ರವೇಶಿಸುವ ಸಾಧ್ಯತೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.
ಇದನ್ನೂ ಓದಿ: ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್ಗೆ
ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
‘ಸಾರಿ ಭಾಯ್, ಕ್ಷಮಿಸಿ’: ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿದ ಪಾಪರಾಜಿಗಳು
ಮುಂಬೈನ ಆಸ್ಪತ್ರೆಯೊಂದರ ಹೊರಗಡೆ ತಮ್ಮ ಖಾಸಗಿತನಕ್ಕೆ ಧಕ್ಕೆ ತಂದ ಪಾಪರಾಜಿಗಳ ವರ್ತನೆಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೀವ್ರ ಆಕ್ರೋಶ ಹೊರಹಾಕಿದ್ದರು. ಆದರೆ, ಈ ಘಟನೆ ಬಳಿಕ ಅಂದರೆ ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ಪಾಪರಾಜಿಗಳು ರಾಜಿ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಮುಂಬೈನಲ್ಲಿ ನಡೆದ ‘ರಾಜಾ ಶಿವಾಜಿ’ ಸಿನಿಮಾದ ಸಕ್ಸಸ್ ಪಾರ್ಟಿಯಲ್ಲಿ ಸಲ್ಮಾನ್ ಖಾನ್ ಭಾಗವಹಿಸಿದ್ದರು.
ಇದನ್ನೂ ಓದಿ: ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ
ಈ ಚಿತ್ರದಲ್ಲಿ ಸಲ್ಮಾನ್ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಾಯಕ ಹಾಗೂ ನಿರ್ದೇಶಕ ರಿತೇಶ್ ದೇಶ್‌ಮುಖ್ ಜೊತೆಗೆ ಸಲ್ಮಾನ್ ಹೊರಬರುತ್ತಿದ್ದಂತೆ, ಅಲ್ಲಿದ್ದ ಪಾಪರಾಜಿಗಳು ಒಟ್ಟಿಗೆ “ನಮ್ಮನ್ನು ಕ್ಷಮಿಸಿ ಭಾಯ್, ಸಾರಿ” ಎಂದು ಹೇಳಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಆರ್‌ಸಿಬಿ ತಂಡ ಸೇರಿದ ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್
ಐಪಿಎಲ್ 2026ರ ಟೂರ್ನಿಯ ಮಧ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ವೇಗಿಯೊಬ್ಬರ ಎಂಟ್ರಿಯಾಗಿದೆ. ಇಂಗ್ಲೆಂಡ್ ತಂಡದ ಅನುಭವಿ ಬಲಗೈ ವೇಗದ ಬೌಲರ್ ರಿಚರ್ಡ್ ಗ್ಲೀಸನ್ ಅವರು ಅಧಿಕೃತವಾಗಿ ಆರ್‌ಸಿಬಿ ಪಡೆಗೆ ಸೇರಿಕೊಂಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪ್ರಮುಖ ವೇಗದ ಬೌಲರ್ ಒಬ್ಬರು ಗಾಯದಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನವನ್ನು ತುಂಬಲು ಆರ್‌ಸಿಬಿ ಮ್ಯಾನೇಜ್‌ಮೆಂಟ್ ಇಂಗ್ಲೆಂಡ್‌ನ ರಿಚರ್ಡ್ ಗ್ಲೀಸನ್ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 6:01 pm, Thu, 21 May 26
