ವಾಣಿಜ್ಯ ನಗರಿ ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ 15,000 ಜನರನ್ನು ವಿಷದ ಗುಳಿಗೆ ನೀಡಿ ಕೊಲ್ಲಲು ಸಂಚು ರೂಪಿಸಿದ್ದ ಬಿಬಿಎ ಪದವೀಧರ ಫಯ್ಯಾಜ್ ಪ್ರೇಮ್‌ಜಿಯನ್ನು ಪೊಲೀಸರು 14,900 ವಿಷದ ಕ್ಯಾಪ್ಸೂಲ್‌ಗಳೊಂದಿಗೆ ಬಂಧಿಸಿ, ಭೀಕರ ಹತ್ಯಾಕಾಂಡವನ್ನು ಕೂದಲೆಳೆಯ ಅಂತರದಲ್ಲಿ ತಪ್ಪಿಸಿದ್ದಾರೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ ದಾಖಲೆಯ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಹಾಕಲಾಗಿದ್ದು, ಶೇ. 96.4 ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನು ಸ್ಯಾಂಡಲ್‌ವುಡ್‌ನಲ್ಲಿ ನಟ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ತಮ್ಮ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಮೂಲಕ ಹೊಸ ಕಥೆಗಾರರಿಗೆ ಮುಕ್ತ ವೇದಿಕೆ ಕಲ್ಪಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
