Headlines

TV9 Kannada News Live: ಬೆಂಗಳೂರಿನಲ್ಲಿ ಬಿಡಾಡಿ ವಾಹನಗಳ ಜಪ್ತಿ ಶುರು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Breaking News in TV9 Kannada Live 10 July Karnataka Rains, Bangalore Weather, School Holidays New Airport Latest News Updates

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Breaking News Today Live Updates in Kannada: ಕರ್ನಾಟಕದ ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡಿದ್ದು, ಬೆಳಗಾವಿ, ಉಡುಪಿ, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಐಎಂಡಿ (IMD) ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ತಗ್ಗು ಪ್ರದೇಶಗಳ ನಿವಾಸಿಗಳಿಗೆ ಜಾಗರೂಕರಾಗಿರಲು ಕೆಎಸ್‌ಎನ್‌ಡಿಎಂಸಿ ಸೂಚಿಸಿದೆ. ಮತ್ತೊಂದೆಡೆ, ನಗರದ ಸೌಂದರ್ಯೀಕರಣಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಜಿಬಿಎ (GBA) ಮತ್ತು ಸಂಚಾರಿ ಪೊಲೀಸರು ಜಂಟಿಯಾಗಿ ಅನಾಥ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. 7 ದಿನಗಳಲ್ಲಿ ವಾಹನ ಸರಿಸದಿದ್ದರೆ ಜಪ್ತಿ ಮಾಡಿ ಹರಾಜು ಹಾಕಲಾಗುವುದು. ಇನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ, ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದಲ್ಲಿ ಪ್ರವಾಹದ ಭೀಕರತೆ ಹೆಚ್ಚಾಗಿದ್ದು, ಸಾಕಣೆ ಕೇಂದ್ರಗಳಿಂದ ಮುಕ್ತವಾದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ವಸತಿ ಪ್ರದೇಶಗಳಿಗೆ ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Source link

Leave a Reply

Your email address will not be published. Required fields are marked *