Breaking News Today Live Updates in Kannada: ತಮಿಳುನಾಡಿಗೆ 3,500 ಕ್ಯೂಸೆಕ್ಸ್ ನೀರು ಹರಿಸುವ CWRC ಆದೇಶ ಖಂಡಿಸಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಇಂದು ಕೆಆರ್‌ಎಸ್ ಜಲಾಶಯ ಮುತ್ತಿಗೆ ಚಳವಳಿ ನಡೆಸುತ್ತಿದ್ದು, ಮಂಡ್ಯದಲ್ಲಿ ಹೋರಾಟ ತೀವ್ರಗೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಕಗ್ಗಂಟಿಗೆ ತೆರೆಬಿದ್ದಿದ್ದು, ರಾಹುಲ್ ಗಾಂಧಿ ಪಟ್ಟಿಗೆ ಅಂತಿಮ ಅಂಕಿತ ಹಾಕಿದ್ದಾರೆ. ಸೋಮವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಹೊಸ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್‌ನಲ್ಲಿದ್ದು, ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಂಗೀಕಾರವನ್ನು ಐತಿಹಾಸಿಕ ಕ್ಷಣ ಎಂದು ಕರೆದಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
