U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಪಂದ್ಯವು ಟೈ ಆಗಿತ್ತು. ಹೀಗಾಗಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಪಾಕಿಸ್ತಾನ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2025 ರ ಸೀನಿಯರ್ ಪುರುಷರ ಏಷ್ಯಾಕಪ್ ಮುಗಿದ ಸುಮಾರು ಮೂರು ತಿಂಗಳ ನಂತರ, ಎರಡು ದೇಶಗಳ ಅಂಡರ್-19 ತಂಡಗಳು ಏಷ್ಯಾಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದ ಕಾರಣ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಅಲ್ಲದೆ ಗುಂಪು ಹಂತದ ಪಂದ್ಯದಲ್ಲಿ ಇದೇ ಪಾಕಿಸ್ತಾನವನ್ನು ಭಾರತ ಸೋಲಿಸಿದ್ದ ಕಾರಣ, ಈ ಪಂದ್ಯದಲ್ಲೂ ಭಾರತಕ್ಕೆ ಜಯ ಖಚಿತ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಫೈನಲ್​ನಲ್ಲಿ ಭಾರತದ ಬೌಲಿಂಗ್ ಹಾಗೂ ಬ್ಯಾಟಿಂಗ್‌ ಎರಡೂ ಕಳಪೆಯಾಗಿತ್ತು. ಹೀಗಾಗಿ ಪಂದ್ಯ ಏಕಪಕ್ಷೀಯವಾಗಿ ಅಂತ್ಯವಾಯಿತು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆದರೆ ನಾಯಕನ ಈ ನಿರ್ಧಾರ ಸಂಪೂರ್ಣವಾಗಿ ತಪ್ಪೆಂದು ಸಾಬೀತಾಯಿತು. ಈಗಾಗಲೇ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ಪಾಕಿಸ್ತಾನದ ಆರಂಭಿಕ ಆಟಗಾರ ಸಮೀರ್ ಮಿನ್ಹಾಸ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು, ಕೇವಲ 71 ಎಸೆತಗಳಲ್ಲಿ ಶತಕ ಗಳಿಸಿದರು. ಕೇವಲ 113 ಎಸೆತಗಳಲ್ಲಿ 17 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಒಳಗೊಂಡ 172 ರನ್ ಬಾರಿಸಿ ಔಟಾದರು. ಮಿನ್ಹಾಸ್ ಔಟಾದ ನಂತರ ಭಾರತ ತಂಡವು ಚೇತರಿಸಿಕೊಂಡರೂ, ಇತ್ತ ಪಾಕಿಸ್ತಾನ ಕೂಡ 8 ವಿಕೆಟ್‌ಗೆ 347 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು.

Source link

Leave a Reply

Your email address will not be published. Required fields are marked *