ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವಿನ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ಯುವ ಪಡೆ ಅಫ್ಘಾನಿಸ್ತಾನ ತಂಡವನ್ನು 7 ವಿಕೆಟ್ಗಳಿಂದ ಮಣಿಸಿ ಸತತ 6ನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್ಗೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಇಬ್ಬರ ಶತಕದ ನೆರವಿನಿಂದ 310 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ಇನ್ನು 53 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು. ಇದರ ಜೊತೆಗೆ ಅಂಡರ್ 19 ವಿಶ್ವಕಪ್ ಸೆಮಿಫೈನಲ್ನಲ್ಲಿ ಅತಿದೊಡ್ಡ ಗುರಿ ಬೆನ್ನಟ್ಟಿದ ದಾಖಲೆಯನ್ನು ಭಾರತ ತಂಡ ಬರೆಯಿತು.
