
ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್ಗಳಿಗೆ ಆಲೌಟ್ ಆಗುವ ಮೂಲಕ 100 ರನ್ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳು ಸೇರಿದ್ದವು.