ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿ ಅನುಕಲ್ಪ್ ಮಿಶ್ರಾ ಕದ್ದ ದೇಣಿಗೆ ಹಣದಿಂದಲೇ ಮನೆ ಕಟ್ಟಿದ್ದು ಬೆಳಕಿಗೆ ಬಂದಿದೆ. ಅನುಕಲ್ಪ್ನ ಇನಾಯತ್ ನಗರದ ಬಸವ ಮುತಲ್ಕೆ ಗ್ರಾಮದಲ್ಲಿನ ಹೊಸ ಮನೆ ಸೇರಿದಂತೆ ಆತನ ತಂದೆ ಮತ್ತು ಮೂವರು ಸಹೋದರರ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಭಕ್ತರು ಭಕ್ತಿಯಿಂದ ರಾಮಮಂದಿರಕ್ಕೆ ನೀಡಿದ್ದ ಹುಂಡಿ ಹಣವನ್ನು ಕಳವು ಮಾಡಿದ ಅನುಕಲ್ಪ್, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದೆ. ಜೂನ್ 23 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ SIT ಪ್ರಾಥಮಿಕ ವರದಿ ಸಲ್ಲಿಸಿದ್ದು, ಅನೇಕ ಆಘಾತಕಾರಿ ಅಂಶಗಳು ಬಹಿರಂಗಗೊಂಡಿವೆ. SIT ಅಧಿಕಾರಿಗಳು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಇದುವರೆಗೆ ಸುಮಾರು 80 ಲಕ್ಷ ರೂಪಾಯಿಯಷ್ಟು ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಸಂಪಾದಿಸಿದ ಹಣವನ್ನು ಎಲ್ಲಿ ಹೂಡಿಕೆ ಮಾಡಲಾಗಿದೆ ಎಂಬುದರ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:
