ನವದೆಹಲಿ, ಫೆಬ್ರವರಿ 19: ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ. ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20 ಕ್ಕೂ ಹೆಚ್ಚು ರಾಜ್ಯ ಮತ್ತು ಸರ್ಕಾರದ ಮುಖ್ಯಸ್ಥರು ಮತ್ತು ಸುಮಾರು 60 ಮಂತ್ರಿಗಳು, ಉಪಮಂತ್ರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ಪ್ರತಿನಿಧಿಗಳು ಇರಲಿದ್ದಾರೆ.
ಮತ್ತೊಂದೆಡೆ, ದೆಹಲಿಯಲ್ಲಿ ನಡೆಯುತ್ತಿರುವ ಜಾಗತಿಕ ಎಐ ಶೃಂಗದಲ್ಲಿ ಇದೀಗ ಗಿನ್ನೆಸ್ ವಿಶ್ವದಾಖಲೆ ಬರೆಯಲು ಸಿದ್ಧವಾಗಿದೆ. ಈ ಶೃಂಗದಲ್ಲಿ ಕೇವಲ 24 ಗಂಟೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಬಳಸುವ ಪ್ರತಿಜ್ಞೆ ಮಾಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
