
ಮನೆಯಲ್ಲೇ ಮುದ್ದಾಗಿ ಬೆಳೆದ ಸಾಕು ಬೆಕ್ಕೊಂದು ತನ್ನ ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಬೆಕ್ಕು ಮಹಿಳೆಯ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೊಠಡಿಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೊಠಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ವೀಕ್ಷಣೆ ಪಡೆದಿರುವ ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದು, ಅತ್ಯಂತ ಶಾಂತ ಸ್ವಭಾವದ ಪ್ರಾಣಿಗಳೂ ಕೂಡ ಕೆಲವು ಸಂದರ್ಭಗಳಲ್ಲಿ ಹೀಗೆ ವಿಪರೀತ ಆಕ್ರಮಣಕಾರಿಯಾಗಿ ವರ್ತಿಸಬಹುದು ಎಂಬ ಸತ್ಯ ಈಗ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.