ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.