Video: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ ಅಲ್ಲೇ ಹೋಯ್ತು ಪ್ರಾಣ

Video: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ ಅಲ್ಲೇ ಹೋಯ್ತು ಪ್ರಾಣ

ತೆಲಂಗಾಣ, ಮಾರ್ಚ್​ 11: ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್​ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು.  ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *