ಮಹಾರಾಷ್ಟ್ರದ ಕಲ್ಯಾಣ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಮಹಿಳೆಯೊಬ್ಬರು ಆಕಸ್ಮಿಕವಾಗಿ ಜಾರಿ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಿನ ಅಪಾಯಕಾರಿ ಅಂತರಕ್ಕೆ ಬಿದ್ದಾಗ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ತನ್ನ ಒಂದು ವರ್ಷದ ಮಗುವಿನೊಂದಿಗೆ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಪ್ರಯಾಣಿಕರು ಮತ್ತು ರೈಲ್ವೇ ಸಿಬ್ಬಂದಿ ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಎಳೆಯುವ ಮೂಲಕ ಜೀವ ಉಳಿಸಿದ್ದಾರೆ. ಪ್ರಸ್ತುತ ಮಹಿಳೆ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಜನರ ಮಾನವೀಯತೆ ಮತ್ತು ಸಮಯಪ್ರಜ್ಞೆಯನ್ನು ಬಿಂಬಿಸುವ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದರ ಜೊತೆಗೆ ರೈಲು ನಿಲ್ದಾಣಗಳಲ್ಲಿ ಜಾಗರೂಕರಾಗಿರಬೇಕಾದ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
