ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಸಾಹಸ ಮಾಡಿ ವ್ಯಕ್ತಿಯೊಬ್ಬ ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ ಬಿದ್ದು ಪೆಟ್ಟು ಮಾಡಿಕೊಂಡಿರುವ ಘಟನೆ ನಡೆದಿದೆ. ಚಲಿಸುತ್ತಿರುವ ರೈಲಿನ ಬಾಗಿಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ರೈಲು ಪ್ಲಾಟ್‌ಫಾರ್ಮ್ ಅನ್ನು ಪ್ರವೇಶಿಸುತ್ತಿದ್ದಂತೆ ಕೆಳಕ್ಕೆ ಜಿಗಿದಿದ್ದು, ವೇಗವಾಗಿ ರೈಲು ಚಲಿಸುತ್ತಿದ್ದ ಪರಿಣಾಮ ಸಮತೋಲನ ತಪ್ಪಿ ನೆಲಕ್ಕೆ ಅಪ್ಪಳಿಸಿದ್ದಾನೆ. ಈ ಭೀಕರ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜೀವಕ್ಕೆ ಅಪಾಯ ತರುವ ಇಂತಹ ಸಾಹಸಗಳು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲು ಸಂಪೂರ್ಣವಾಗಿ ನಿಲ್ಲುವ ಮುನ್ನ ಇಳಿಯುವುದು ಅಥವಾ ಹತ್ತುವುದು ಕಾನೂನುಬಾಹಿರ ಮತ್ತು ಪ್ರಾಣಾಪಾಯಕ್ಕೆ ಆಹ್ವಾನ ನೀಡಿದಂತೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ಬೇಜವಾಬ್ದಾರಿಯುತ ನಡವಳಿಕೆಗಳು ತೀವ್ರ ಗಾಯ ಅಥವಾ ಸಾವಿಗೆ ಕಾರಣವಾಗಬಹುದು, ಆದ್ದರಿಂದ ಪ್ರಯಾಣಿಕರು ಯಾವಾಗಲೂ ರೈಲು ನಿಂತ ನಂತರವೇ ಇಳಿಯಬೇಕು ಎಂದು ತಿಳಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
