ಮೂಕ ಪ್ರಾಣಿಗಳು ತನ್ನ ಕಂದಮ್ಮಗಳ ಮೇಲೆ ಪ್ರೀತಿ, ಕಾಳಜಿ ತೋರುತ್ತವೆ. ಮರಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತವೆ. ಇದೀಗ ತಾಯಾನೆ (mother elephant) ತನ್ನ ಕಂದನ ಮೇಲೆ ಕಾಳಜಿ ತೋರಿದ ದೃಶ್ಯ ವೈರಲ್ ಆಗಿದೆ. ಆನೆಯೊಂದು ತನ್ನ ಕಂದಮ್ಮನನ್ನು ಜೋಪಾನವಾಗಿ ನದಿ ದಾಟಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಶೀಶ್ ಜೈನ್ (Ashish Jain) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಆನೆಗಳ ಹಿಂಡು ನದಿ ದಾಟುತ್ತಿವೆ. ಇದರಲ್ಲಿ ಮರಿಯಾನೆಯೊಂದು ನೀರಿನ ರಭಸಕ್ಕೆ ನದಿ ದಾಟಲು ಕಷ್ಟ ಪಡುತ್ತಿದ್ದು, ಇತ್ತ ತಾಯಾನೆ ಆಸರೆಯಾಗಿ ನಿಂತಿದೆ. ಕಂದಮ್ಮನನ್ನು ತನ್ನ ಜತೆಗೆ ನದಿ ದಾಟಿಸಿರುವುದನ್ನು ಕಾಣಬಹುದು.
ವೈರಲ್ ವಿಡಿಯೋ ಇಲ್ಲಿದೆ
ಇದನ್ನೂ ಓದಿ: ಓಡುತ್ತಿದ್ದ ಕಂದಮ್ಮನ ಬಾಲ ಹಿಡಿದು ಎಳೆದು ನಿಲ್ಲಿಸಿದ ತಾಯಾನೆ, ವೈರಲ್ ಆಯ್ತು ದೃಶ್ಯ
ಈ ವಿಡಿಯೋ ನವತ್ತಾರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದ್ಭುತ ಹಾಗೂ ಅಪರೂಪದ ಕ್ಷಣ ಎಂದು ಹೇಳಿದ್ದಾರೆ. ಇನ್ನೊಬ್ಬರು, ಸುಂದರವಾದ ದೃಶ್ಯ ಎಂದಿದ್ದಾರೆ. ಮತ್ತೊಬ್ಬರು, ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
