
ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಶ್ವಾನಗಳು ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಪ್ರಾಣಿ. ಮನೆಯ ಸದಸ್ಯರಂತೆ ಇರುವ ಈ ಶ್ವಾನವು ಒಂದು ತುತ್ತು ಹಾಕಿದ್ರೆ ಸಾಕು, ಜೀವನ ಪರ್ಯಂತ ಮಾಲೀಕನಿಗೆ ಋಣಿಯಾಗಿರುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ತನ್ನ ಮೇಲೆ ಕಾಳಜಿ ತೋರುವ ವ್ಯಕ್ತಿ ಹೂವಿನ ಮಾಲೆ ಮಾರುತ್ತಿದ್ದರೆ, ಶ್ವಾನವು ಆ ಹಿರಿಜೀವಕ್ಕೆ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ.
Somanath kanrar ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಶ್ವಾನ ಹಾಗೂ ವ್ಯಕ್ತಿಯ ನಡುವಿನ ಬಾಂಧವ್ಯವನ್ನು ನೋಡಬಹುದು. ಹಿರಿಯ ವ್ಯಕ್ತಿಯೊಬ್ಬರು ಹೂವಿನ ಮಾಲೆಯನ್ನು ಮಾರಾಟ ಮಾಡುತ್ತಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಗೆ ಕೈಯಲ್ಲಿದ್ದ ಮಾಲೆಯನ್ನು ಕೊಡುತ್ತಿದ್ದರೆ, ಇತ್ತ ಶ್ವಾನವು ತನ್ನ ಬಾಯಲ್ಲಿ ಹೂವಿನ ಮಾಲೆಯೊಂದನ್ನು ಹಿಡಿದು ಪಕ್ಕದಲ್ಲಿ ನಿಂತುಕೊಂಡಿದೆ.
ವೈರಲ್ ವಿಡಿಯೋ ಇಲ್ಲಿದೆ
ಇದನ್ನೂ ಓದಿ: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ
ಈ ವಿಡಿಯೋ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ ಎಂದಿದ್ದಾರೆ. ಮತ್ತೊಬ್ಬರು, ಪ್ರಾಣಿಗಳಿಗೆ ಅನ್ನ ಹಾಕಿ, ಅವುಗಳು ನಿಮ್ಮ ಕಷ್ಟ ಸುಖಕ್ಕೆ ಹೆಗಲಾಗುತ್ತವೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಇಂತಹ ದೃಶ್ಯಗಳನ್ನು ನೋಡಲು ಖುಷಿಯೆನಿಸುತ್ತದೆ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ