ಬ್ರೆಜಿಲ್‌ನ ಗೋಯಾನಿಯಾದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮದ್ಯದ ಅಂಗಡಿಯ ಮುಂಭಾಗದ ಫುಟ್‌ಪಾತ್‌ಗೆ ನುಗ್ಗಿದ ಪರಿಣಾಮ, ಮಗು ಸೇರಿದಂತೆ ಕನಿಷ್ಠ ಮೂವರು ಭೀಕರವಾಗಿ ಗಾಯಗೊಂಡಿದ್ದಾರೆ. ಬ್ರೂನೋ ಕುನ್ಹಾ ಗೊಂಟಿಜೊ (45) ಎಂಬಾತ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಫುಟ್‌ಪಾತ್ ಮೇಲಿದ್ದ ಮ್ಯಾಥ್ಯೂಸ್ (19), ಪಾಮೆಲ್ಲಾ (20) ಮತ್ತು ಆಕೆಯ ಮಗುವಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದಿಂದ ರೊಚ್ಚಿಗೆದ್ದ ಸ್ಥಳೀಯರು ಚಾಲಕನಿಗೆ ಮನಬಂದಂತೆ ಥಳಿಸಿದ್ದು, ಆತನ ಸ್ಥಿತಿಯೂ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಇದನ್ನೂ ಓದಿ: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
