ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್ ಪಲ್ಟಿಯಾಗಿದೆ. ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದು ಯಾಣಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗಳ ಬಸ್ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ