
ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್ಪಿಜಿ ಸಿಲಿಂಡರ್ಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಮನೆ ಮುಂದಿನ ಸಿಸಿಟವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಕೃತ್ಯದ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾಗತಿಕ ಯುದ್ಧದ ಆತಂಕದಿಂದ ಹೆಚ್ಚಿದ ಬೇಡಿಕೆಯೇ ಕಳ್ಳತನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಳ್ಳರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.